ದಿನಾಂಕ 12.08.2023 ರಂದು ಬಜ್ಪೆ ಸ್ತ್ರೀಶಕ್ತಿ ಗುಂಪಿನ ಸದಸ್ಯರಿಗೆ ಸಹೋದಯ ಬೆಥನಿ ಸೇವಾ ಕೇಂದ್ರ ಬೆಂದೂರು, ಮಂಗಳೂರು ಹಾಗೂ ಅರೈಝ್ ಫೌಂಡೇಶನ್ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ತಡೆ ದಿನದ ಅಂಗವಾಗಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಹೋದಯ ಬೆಥನಿ ಸೇವಾ ಕೇಂದ್ರದ ಸಂಯೋಜಕರಾದ ಭ| ಲೀನಾ ಡಿ ಕೋಸ್ಟ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾನವ ಕಳ್ಳ ಸಾಗಾಣಿಕೆಯು ವ್ಯಕ್ತಿಯನ್ನು ಬಲವಂತವಾಗಿ, ವಂಚನೆಯಿಂದ ಅಥವಾ ಬಲವಂತದಿಂದ ಮತ್ತು ಅವರ ಲಾಭಕ್ಕಾಗಿ ಅವರನ್ನು ಬಳಸಿಕೊಳ್ಳುವ ಪ್ರಕ್ರಿಯೆಯಾಗಿದೆ. ಹಾಗೂ ಇದರಿಂದ ಪರಿಣಾಮ ಮತ್ತು ಈ ಸಾಗಾಣಿಕೆಯಿಂದ ನಾವು ನಮ್ಮನ್ನು ಹೇಗೆ ರಕ್ಷಿಸಿಕೊಳ್ಳಬಹುದೆಂಬುದರ ಕುರಿತು ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹೋದಯ ಬೆಥನಿ ಸೇವಾ ಕೇಂದ್ರದ ಸಿಬ್ಬಂದಿಗಳು ಭಾಗವಹಿಸಿದ್ದರು.