ದಿನಾಂಕ 18.11.2023 ರಂದು ಬಾಳ ಗ್ರಾಮ ಪಂಚಾಯತ್ ದ.ಕ, ಮಂಗಳೂರು ಇವರ ವತಿಯಿಂದ ಆಯೋಜಿಸಲಾದ ಮಕ್ಕಳ ಗ್ರಾಮ ಸಭೆಯಲ್ಲಿ ಸಹೋದಯ ಬೆಥನಿ ಸೇವಾ ಕೇಂದ್ರದ ಕಾರ್ಯಕರ್ತೆಯರಾದ ಶ್ರೀಮತಿ ನಳಿನಿ ಮತ್ತು ಶ್ರೀಮತಿ ರೆನಿಲ್ಲಾ ರೋಶ್ನಿ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿ ಮಕ್ಕಳ ಗ್ರಾಮ ಸಭೆಯ ಉದ್ದೇಶ,ಮಕ್ಕಳಿಗಿರುವ ಹಕ್ಕುಗಳ ಬಗ್ಗೆ ತಿಳಿಸಲಾಯಿತು. ಗ್ರಾಮ ಸಭೆಗಳಲ್ಲಿ ಮಕ್ಕಳಿಗೆ ಯಾವ ರೀತಿಯ ರಕ್ಷಣೆ ಸಿಗಬೇಕು ಹಗೂ ಕೆಲವೊಂದು ಶಾಲೆ, ಪರಿಸರ ಮತ್ತು ತಮ್ಮ ಮನೆಗಳಲ್ಲಿ ಸಮಸ್ಯೆಗಳು ಕಂಡು ಬಂದಲ್ಲಿ ಮಕ್ಕಳ ಗ್ರಾಮ ಸಭಗಳಲ್ಲಿ ಮುಕ್ತಾವಾಗಿ ಚರ್ಚೆ ನಡೆಸಿ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಬಹುದೆಂಬುದರ ಬಗ್ಗೆ ಹಾಗೂ ಒಳ್ಳೆ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶ, ಮೊಬೈಲ್ ಬಳಕೆಯ ಪರಿಣಾಮದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಬಾಳ ಪಂಚಾಯತ್ನ ಅಧ್ಯಕ್ಷರಾದ ಶ್ರೀ ಶಂಕರ್ ಜೋಗಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರಕಾಶ್ ವೆಂಕಟ್ ರಮಣ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಶಾಲಾ ಶಿಕ್ಷಕರ ವೃಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಮೊದಲಾದವರು ಭಾಗವಹಿಸಿದ್ದರು.