ದಿನಾಂಕ 28.03.2024 ರಂದು ಸಹೋದಯ ಬೆಥನಿ ಸೇವಾ ಕೇಂದ್ರ ಬೆಂದೂರು, ಮಂಗಳೂರು ಹಾಗೂ ವಿಶ್ವ ವಿದ್ಯಾನಿಲಯ ಕೊಣಾಜೆ ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿಗಳ ವತಿಯಿಂದ ದ.ಕ.ಜಿ.ಪಂ.ಹಿರಿಯ ಪ್ರಾರ್ಥಮಿಕ ಶಾಲೆ ವಿದ್ಯಾರ್ಥಿಗಳ ವತಿಯಿಂದ ಒಂದು ದಿನದ ಕಲಿಕಾ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಮಕ್ಕಳ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ನಂತರ ಮಕ್ಕಳಿಗೆ ಜೀವನ ಕೌಶಲ್ಯ ಹಾಗೂ ಮೌಲ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ತದನಂತರ ಮಕ್ಕಳನ್ನು ಗುಂಪುಗಳನ್ನಾಗಿಸಿ ಏಕಾಗ್ರತೆ, ನಾಯಕತ್ವ ಮೊದಲಾದವುಗಳ ಕುರಿತು ಚಟುವಟಿಕೆಯನ್ನು ನಡೆಸಲಾಯಿತು.
ಮಕ್ಕಳಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ಗುಂಪು ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ಭ| ಆಗ್ನೇಶಿಯ,ಕು| ಫಿದಾ, ಮೊದಲಾದವರು ಭಾಗವಹಿಸಿದ್ದರು. ಸ್ವಾಗತ ಕು| ಕಾವ್ಯ, ಕು| ಲಕ್ಷ್ಮಿ ಇವರ ಧನ್ಯವಾದದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.