ದಿನಾಂಕ 3.04.2024 ಮತ್ತು 4.04.2024 ರಂದು ಸಹೋದಯ ಬೆಥನಿ ಸೇವಾ ಕೇಂದ್ರದ ವತಿಯಿಂದ ಸಂತ ಸೆಬಾಸ್ಟಿಯನ್ ಹಿರಿಯ ಪ್ರಾಥಮಿಕ ಶಾಲೆ ಬೆಂದೂರು, ಇಲ್ಲಿನ ವಿದ್ಯಾರ್ಥಿಗಳಿಗೆ 2 ದಿನದ ಬೇಸಿಗೆ ಶಿಬಿರವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ದೇವರ ಸ್ಮರಣೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ನಂತರ ಮಕ್ಕಳ ಸ್ವ ಪರಿಚಯವನ್ನು ಮಾಡಿಸುತ್ತಾ ಶಿಬಿರವನ್ನು ಮುಂದುವರಿಸುತ್ತಾ ಕು| ಲಕ್ಷ್ಮೀ ಇವರು ಮಕ್ಕಳಿಗೆ ಜೀವನ ಕೌಶಲ್ಯ ಹಾಗೂ ಮಲ್ಯಗಳ ಕುರಿತು ಮಾಹಿತಿ ನೀಡಿದರು ನಂತರ ಮಕ್ಕಳಿಗೆ ಕಲಿಕೆಗೆ ಪೂರಕವಾದ ಗುಂಪು ಚಟುವಟಿಕೆಗಳನ್ನು ನಡೆಸಲಾಯಿತು.
ಶಿಬಿರದ 2 ನೇ ದಿನದಂದು ಮಕ್ಕಳಿಗೆ ಸಹೋದಯ ಸಂಸ್ಥೆಯ ಸಂಯೋಜಕರಾದ ಭ| ಲೀನಾ ಡಿ ಕೋಸ್ಟ ಇವರು ಮಕ್ಕಳಿಗೆ ಶಿಬಿರದ ಮಹತ್ವ ಹಾಗೂ ಉಪಯೋಗದ ಬಗ್ಗೆ ತಿಳಿಸಿದರು. ನಂತರ ಮಕ್ಕಳಿಗೆ ಆಟೋಟ ಸ್ಪರ್ಧೆಯನ್ನು ನಡೆಸಿ ವಿಜೇತ ಮಕ್ಕಳಿಗೆ ಬಹುಮಾನವನ್ನು ನೀಡಿ ಪ್ರೋತ್ಸಾಹಿಸಲಾಯಿತು. ತದನಂತರ ಮಕ್ಕಳಿಂದ ನೃತ್ಯ,ಹಾಡು ಮೊದಲಾದವುಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಸಹೋದಯ ಬೆಥನಿ ಸೇವಾ ಕೇಂದ್ರದ ಸಂಯೋಜಕರಾದ ಭ| ಲೀನಾ ಡಿ ಕೋಸ್ಟ, ಶಾಲಾ ಮುಖ್ಯೋಪಾಧ್ಯಾಯರು, ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ಪ್ರಾಧ್ಯಪಕರು, ವಿಶ್ವ ವಿದ್ಯಾನಿಲಯ, ಕೊಣಾಜೆ ಇಲ್ಲಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಮೊದಲಾದವರು ಭಾಗವಹಿಸಿದ್ದರು.