ಹೆಣ್ಣುಮಕ್ಕಳ ದಿನಾಚರಣೆಯ ಪ್ರಯುಕ್ತ ದಿನಾಂಕ 12.9.2024 ಗುರುವಾರದಂದು ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಕಾಟಿಪಳ್ಳ ಮತ್ತು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಕಿನ್ನಿಗೋಳಿ ಹಾಗೂ 13.9.2024 ಶುಕ್ರವಾರದಂದು ಮೆಡಲಿನ್ ಹಿರಿಯ ಪ್ರಾಥಮಿಕ ಶಾಲೆ ಮುಲ್ಕಿ ಮತ್ತು ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ಕೆಲ್ವಾರಿ ನಂತೂರು ಇಲ್ಲಿ ಸಹೋದಯ ಬೆಥನಿ ಸೇವಾಕೇಂದ್ರ ಬೆಂದೂರು ಮಂಗಳೂರು ವತಿಯಿಂದ ಪೋಕ್ಸೋ ಕಾಯಿದೆ, ಸುರಕ್ಷತೆ ಮತ್ತು ಅಸುರಕ್ಷತೆ ಹಾಗೂ ಹೆಣ್ಣುಮಕ್ಕಳ ಶಿಕ್ಷಣದ ಪ್ರಾಮುಖ್ಯತೆ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸಹೋದಯ ಬೆಥನಿಸೇವಾಕೇಂದ್ರದ ಕಾರ್ಯಕರ್ತೆಯರಾದ ಶ್ರೀಮತಿ ನಳಿನಿ ಜಿ ಶೆಟ್ಟಿ ಹಾಗೂ ಶ್ರೀಮತಿ ರೆನ್ನಿಲ್ಲಾ ರೋಶ್ನಿ ಇವರು ಸಂಪನ್ಮೂಲ ವ್ಯಕ್ತಿಯಾಗಿ 5, 6, 7ನೇ ತರಗತಿ ಮಕ್ಕಳಿಗೆ ಮಾಹಿತಿಯನ್ನು ನೀಡಿ ತದನಂತರ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಮತ್ತು ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇಲ್ಲಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಕಾರ್ಯಕ್ರಮಕ್ಕೆ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಭಾಗವಹಿಸಿದರು. ಸ್ಪರ್ಧೆಯಲ್ಲಿ ಗೆದ್ದ ಮಕ್ಕಳಿಗೆ ಬಹುಮಾನಗಳನ್ನು ನೀಡಿ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.