ದಿನಾಂಕ 5.04.2019 ಸಹೋದಯ ಬೆಥನಿ ಸೇವಾ ಕೇಂದ್ರದ ವತಿಯಿಂದ ಸಂತ ಸೆಬಾಸ್ಟಿಯನ್ ಶಾಲೆ ಬೆಂದೂರು ಇಲ್ಲಿನ ಒಂದನೇ ತರಗತಿಯಿಂದ 7ನೇ ತರಗತಿಯ ವರೆಗಿನ ಮಕ್ಕಳಿಗೆ ಒಂದು ದಿನದ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಯಿತು. ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ನಂತರ ಒಂದನೇ ತರಗತಿಯಿಂದ 7ನೇ ತರಗತಿಯ ವರೆಗಿನ ಮಕ್ಕಳನ್ನು ಗುಂಪುಗಳನ್ನಾಗಿ ಮಾಡಿ 5ನೇಯಿಂದ 7ನೇ ತರಗತಿಯ ವರೆಗಿನ ಮಕ್ಕಳಿಗೆ ಕಲಿಕೆಗೆ ಅಗತ್ಯವಿರುವ ವಿಷಯಗಳನ್ನು ಕೊಟ್ಟು ಅವರಿಂದಲೇ ಅಭಿನಯಿಸಲು ಹೇಳಲಾಯಿತು. ಮತ್ತು 3ನೇ ಯಿಂದ 4ನೇ ತರಗತಿ ಒಂದೊಂದು ಕಲಿಕೆಯ ವಿಷಯಗಳನ್ನು ಕೊಟ್ಟು ಅವರಿಂದಲೇ ಬರೆಯಿಸಲಾಯಿತು ಬಳಿಕ ಮಕ್ಕಳಿಗೆ ಆಟಗಳನ್ನು ಆಡಿಸಲಾಯಿತು. ಮಧಾಹ್ನದ ನಂತರ ಮಕ್ಕಳಿಂದಲೇ ಮನೋರಂಜನ ಕಾರ್ಯಕ್ರಮಗಳನ್ನು ನಡೆಸಲಾಯಿತು. ತದನಂತರ ಸಹೋದಯ ಸಂಸ್ಥೆಯ ಸಂಯೋಜಕರಾದ ಭ|ಲೀನಾ ಡಿ’ಕೋಸ್ಟರವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ನೀಡಲಾಯಿತು. ಶಿಕ್ಷಕ ವೃಂದದವರ ಧನ್ಯವಾದದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು. ಒಟ್ಟು 175 ಮಂದಿ ಮಕ್ಕಳು ಭಾಗವಹಿಸಿದರು.